Add parallel Print Page Options

ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು. ಲೋಕದ ಕಟ್ಟಕಡೆಯ ಸ್ಥಳಕ್ಕೆ ನೀವು ಚದರಿಹೋದರೂ ಅಲ್ಲಿಂದ ನಿಮ್ಮನ್ನು ಹಿಂದಕ್ಕೆ ತರುವನು. ನಿಮ್ಮ ಪೂರ್ವಿಕರು ವಾಸಿಸಿದ ಸ್ಥಳಕ್ಕೆ ನಿಮ್ಮನ್ನು ಮತ್ತೆ ಬರಮಾಡುವನು. ಆ ದೇಶವು ನಿಮ್ಮದಾಗುವುದು. ಯೆಹೋವನು ನಿಮಗೆ ಒಳ್ಳೆಯದನ್ನು ಮಾಡುವನು. ನಿಮ್ಮ ಪೂರ್ವಿಕರಿಗಿಂತಲೂ ಅಧಿಕವಾಗಿ ನಿಮ್ಮನ್ನು ಅಭಿವೃದ್ಧಿಪಡಿಸುವನು. ನೀವು ಮತ್ತು ನಿಮ್ಮ ಸಂತತಿಯವರು ತನಗೆ ವಿಧೇಯರಾಗುವಂತೆ ನಮ್ಮ ದೇವರಾದ ಯೆಹೋವನು ಮಾಡುತ್ತಾನೆ. ಆಗ ನೀವು ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದ ಪ್ರೀತಿಸುವಿರಿ ಮತ್ತು ಜೀವಿಸುವಿರಿ.

Read full chapter

11 ಆ ಸಮಯದಲ್ಲಿ ನನ್ನ ಒಡೆಯನು ಎರಡನೆ ಸಾರಿ ಕೈಚಾಚಿ, ಉಳಿದ ತನ್ನ ಜನರನ್ನು ತೆಗೆದುಕೊಳ್ಳುವನು. ಇವರು ಅಶ್ಶೂರ, ಉತ್ತರ ಈಜಿಪ್ಟ್, ದಕ್ಷಿಣ ಈಜಿಪ್ಟ್, ಇಥಿಯೋಪ್ಯ, ಏಲಾಮ್, ಬಾಬಿಲೋನಿಯ, ಹಮಾಥ್ ಮತ್ತು ಕರಾವಳಿ ಪ್ರದೇಶಗಳಲ್ಲಿರುವ ಎಲ್ಲಾ ಜನಾಂಗಗಳವರು. 12 ದೇವರು ಜನಾಂಗಗಳಿಗೆ ಒಂದು ಗುರುತಾಗಿ ಧ್ವಜವನ್ನೆತ್ತುವನು. ಇಸ್ರೇಲ್ ಮತ್ತು ಯೆಹೂದದ ಜನರು ತಮ್ಮ ಸ್ಥಳಗಳಿಂದ ಕಡ್ಡಾಯವಾಗಿ ತೆಗೆದುಹಾಕಲ್ಪಡುವರು. ಆ ಜನರು ಪ್ರಪಂಚದ ಬಹುದೂರದ ಸ್ಥಳಗಳಿಗೆ ಚದರಿ ಹೋಗುವರು. ಆದರೆ ದೇವರು ಅವರನ್ನು ಒಟ್ಟಾಗಿ ಸೇರಿಸುವನು.

13 ಆ ಸಮಯದಲ್ಲಿ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದಕ್ಕೆ ವೈರಿಗಳಿರುವದಿಲ್ಲ ಮತ್ತು ಎಫ್ರಾಯೀಮನಿಗೆ ಯೆಹೂದವು ತೊಂದರೆಯನ್ನು ಮಾಡುವದಿಲ್ಲ. 14 ಆದರೆ ಎಫ್ರಾಯೀಮ್ಯರು ಮತ್ತು ಯೆಹೂದ್ಯರು ಒಟ್ಟುಸೇರಿ ಫಿಲಿಷ್ಟಿಯರನ್ನು ಎದುರಿಸುವರು. ನೆಲದ ಮೇಲೆ ಇರುವ ಸಣ್ಣ ಪ್ರಾಣಿಯನ್ನು ಹಿಡಿಯಲು ಆಕಾಶದಿಂದ ಬರುವ ಹಕ್ಕಿಗಳಂತೆ ಈ ಎರಡು ರಾಷ್ಟ್ರಗಳಿರುವವು. ಅವರು ಒಟ್ಟಾಗಿ ಪೂರ್ವದ ಜನರ ಐಶ್ವರ್ಯವನ್ನು ಕಿತ್ತುಕೊಳ್ಳುವರು. ಎಫ್ರಾಯೀಮ್ ಮತ್ತು ಯೆಹೂದಗಳು ಏದೋಮನ್ನು, ಮೋವಾಬನ್ನು ಮತ್ತು ಅಮ್ಮೋನನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳುವವು.

15 ಯೆಹೋವನು ಸಿಟ್ಟುಗೊಂಡು ಈಜಿಪ್ಟಿನ ಸಮುದ್ರವನ್ನು ವಿಂಗಡಿಸಿದನು. ಅದೇ ರೀತಿಯಲ್ಲಿ ಯೂಫ್ರೇಟೀಸ್ ನದಿಯ ಮೇಲೆ ತನ್ನ ಕೈಯನ್ನು ಚಾಚುವನು. ಆತನು ನದಿಯ ನೀರಿಗೆ ಹೊಡೆಯುವನು. ಆಗ ಅದು ಏಳು ಚಿಕ್ಕ ನದಿಗಳಾಗಿ ಹರಿಯುವುದು. ಆ ನದಿಗಳು ಆಳವಾಗಿರುವದಿಲ್ಲ. ಜನರು ತಮ್ಮ ಕೆರಗಳೊಂದಿಗೆ ದಾಟಬಹುದು. 16 ಅಳಿದುಳಿದ ದೇವಜನರು ಅಶ್ಶೂರ ದೇಶವನ್ನು ಬಿಡಲು ಒಂದು ಮಾರ್ಗವಿರುವದು. ಅದು ದೇವರು ತನ್ನ ಜನರನ್ನು ಈಜಿಪ್ಟಿನಿಂದ ಬಿಡಿಸಿದ ಕಾಲದಂತಿರುವುದು.

Read full chapter

ಇಸ್ರೇಲಿನ ದೇವರಾದ ಯೆಹೋವನು ಹೇಳಿದನು: “ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. ಅವರ ಶತ್ರು ಅವರನ್ನು ಬಾಬಿಲೋನಿಗೆ ತಂದನು. ಆ ಜನರು ಈ ಒಳ್ಳೆಯ ಅಂಜೂರದಂತಿರುವರು. ಆ ಜನರಿಗೆ ನಾನು ದಯೆತೋರುವೆನು. ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು. ಅವರಲ್ಲಿ ನನ್ನನ್ನು ಅರಿತುಕೊಳ್ಳುವ ಬಯಕೆ ಉಂಟಾಗುವಂತೆ ಮಾಡುತ್ತೇನೆ. ನಾನೇ ಯೆಹೋವನು ಎಂಬುದನ್ನು ಅವರು ತಿಳಿದುಕೊಳ್ಳುವರು. ಅವರು ನನ್ನ ಜನರಾಗುವರು ಮತ್ತು ನಾನು ಅವರ ದೇವರಾಗುವೆನು. ನಾನು ಹೀಗೇಕೆ ಮಾಡುತ್ತೇನೆಂದರೆ ಬಾಬಿಲೋನಿನಲ್ಲಿ ಸೆರೆಯಾಳುಗಳಾಗಿದ್ದ ಜನರು ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗುತ್ತಾರೆ.

Read full chapter

21 ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದೆಂದರೆ ಲಾಭವೇ. 22 ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ. 23 ಇವೆರಡರಲ್ಲಿ ಯಾವುದನ್ನು ಆರಿಸಿಕೊಳ್ಳಬೇಕೆಂಬುದೇ ಕಷ್ಟ. ನಾನು ಈ ಜೀವಿತವನ್ನು ಬಿಟ್ಟು ಆತನೊಂದಿಗಿರಲು ಅಪೇಕ್ಷಿಸುತ್ತೇನೆ. ಅದೇ ಉತ್ತಮವಾದದ್ದು. 24 ಆದರೆ ನಾನಿಲ್ಲಿ ಇಹಲೋಕದ ಶರೀರದಲ್ಲಿರುವುದು ನಿಮಗೆ ಅಗತ್ಯವಾಗಿದೆ. 25 ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ 26 ನಾನು ಮತ್ತೆ ನಿಮ್ಮೊಂದಿಗಿರುವಾಗ ನೀವು ಕ್ರಿಸ್ತಯೇಸುವಿನಲ್ಲಿ ನನ್ನ ವಿಷಯವಾಗಿ ಹೆಮ್ಮೆಪಡಲು ಮತ್ತಷ್ಟು ಕಾರಣಗಳಿರುತ್ತವೆ.

Read full chapter