Add parallel Print Page Options

15 ಜನರೆಲ್ಲರೂ ಕ್ರಿಸ್ತನ ಆಗಮನವನ್ನು ನಿರೀಕ್ಷಿಸುತ್ತಿದ್ದುದರಿಂದ ಅವರು ಯೋಹಾನನ ಬಗ್ಗೆ ಆಶ್ಚರ್ಯಪಟ್ಟು, “ಒಂದುವೇಳೆ ಈತನೇ ಕ್ರಿಸ್ತನಾಗಿರಬಹುದು” ಎಂದು ಭಾವಿಸಿಕೊಂಡರು.

16 ಅದಕ್ಕೆ ಯೋಹಾನನು, “ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತಲೂ ಶಕ್ತನಾಗಿರುವಾತನು ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವದಕ್ಕೂ ನನಗೆ ಯೋಗ್ಯತೆ ಇಲ್ಲ. ಆತನು ನಿಮಗೆ ಪವಿತ್ರಾತ್ಮನಲ್ಲಿಯೂ, ಬೆಂಕಿಯಲ್ಲಿಯೂ ದೀಕ್ಷಾಸ್ನಾನ ಮಾಡಿಸುವನು. 17 ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ[a] ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.

Read full chapter

Footnotes

  1. 3:17 ಶುದ್ಧಮಾಡುವುದಕ್ಕೆ “ಯೇಸು ಒಳ್ಳೆಯವರನ್ನು ಕೆಟ್ಟವರಿಂದ ಬೇರ್ಪಡಿಸುವನು” ಎಂಬುದು ಯೋಹಾನನ ಅರ್ಥವಾಗಿತ್ತು.