Add parallel Print Page Options

41 ಯೆಹೂದದ ಅರಸನಾಗಿದ್ದ ಹಿಜ್ಕೀಯನ ಕಾಲದಲ್ಲಿ ಇದು ಆಯಿತು. ಇವರು ಗೆದೋರಿಗೆ ಬಂದು ಹಾಮನ ಸಂತತಿಯವರೊಂದಿಗೆ ಯುದ್ಧಮಾಡಿ ಅವರ ಗುಡಾರಗಳನ್ನು ನಾಶಮಾಡಿದರು. ಅಲ್ಲದೆ ಮೆಗೂನ್ಯರ ವಿರುದ್ಧವಾಗಿ ಯುದ್ಧಮಾಡಿ ಅಲ್ಲಿ ನೆಲೆಸಿದರು. ಇವರು ಮೆಗೂನ್ಯರನ್ನೆಲ್ಲಾ ನಾಶಮಾಡಿದರು. ಇಂದಿನವರೆಗೂ ಮೆಗೂನ್ಯರಲ್ಲಿ ಯಾರೂ ಉಳಿದಿಲ್ಲ. ಹೀಗೆ ಆ ಸ್ಥಳದಲ್ಲಿ ಅವರು ನೆಲೆಸಿದರು; ಯಾಕೆಂದರೆ ಅವರ ಪಶುಗಳಿಗೆ ಅಲ್ಲಿ ಸಾಕಷ್ಟು ಹುಲ್ಲಿತ್ತು.

42 ಸಿಮೆಯೋನನ ಕುಲದ ಐನೂರು ಮಂದಿ ಸೇಯೀರ್ ಬೆಟ್ಟಪ್ರಾಂತ್ಯಕ್ಕೆ ಹೋದರು. ಇಷ್ಷೀಯ ಗಂಡುಮಕ್ಕಳು ಈ ಗುಂಪಿನ ನಾಯಕರಾಗಿದ್ದರು. ಅವರು ಯಾರೆಂದರೆ: ಪೆಲಟ್ಯ, ನೆಗರ್ಯ, ರೆಫಾಯ ಮತ್ತು ಉಜ್ಜೀಯೇಲ್. ಅಲ್ಲಿ ವಾಸಿಸುವ ಜನರೊಂದಿಗೆ ಇವರು ಕಾದಾಡಿದರು. 43 ಆಗ ಅಲ್ಲಿ ಸ್ವಲ್ಪವೇ ಮಂದಿ ಅಮಾಲೇಕ್ಯರು ವಾಸಿಸುತ್ತಿದ್ದರು. ಈ ಸಿಮೆಯೋನರು ಅವರನ್ನು ಕೊಂದು ಆ ಸ್ಥಳದಲ್ಲಿ ನೆಲೆಸಿದರು. ಇಂದಿನವರೆಗೂ ಸಿಮೆಯೋನರು ಅಲ್ಲಿ ನೆಲೆಸಿದ್ದಾರೆ.

Read full chapter