Add parallel Print Page Options

ಅಲ್ಲದೆ ಸೈರಸ್ ರಾಜನು ದೇವಾಲಯಕ್ಕೆ ಸಂಬಂಧಿಸಿದ ವಸ್ತುಗಳನ್ನೆಲ್ಲಾ ಹೊರತೆಗೆದನು. ನೆಬೂಕದ್ನೆಚ್ಚರ ಅರಸನು ಜೆರುಸಲೇಮ್ ದೇವಾಲಯದಿಂದ ಸೂರೆಮಾಡಿ ತಂದ ಸಾಮಾಗ್ರಿಗಳನ್ನು ತನ್ನ ವಿಗ್ರಹಗಳನ್ನಿಡುವ ಕೋಣೆಯಲ್ಲಿ ಇಟ್ಟಿದ್ದನು. ಪರ್ಶಿಯಾದ ರಾಜನಾದ ಸೈರಸ್ ತನ್ನ ಖಜಾನೆಯ ಮೇಲ್ವಿಚಾರಕನಾದ ಮಿತ್ರದಾತನಿಗೆ ಆ ವಸ್ತುಗಳನ್ನು ಹೊರತರಲು ಹೇಳಿದನು. ಮಿತ್ರದಾತನು ಯೆಹೂದ ನಾಯಕನಾದ ಶೆಷ್ಬಚ್ಚರನಿಗೆ ಆ ವಸ್ತುಗಳನ್ನು ಕೊಟ್ಟನು.

ಅವು ಯಾವುವೆಂದರೆ: ಬಂಗಾರದ ಬೋಗುಣಿಗಳು 30 ಬೆಳ್ಳಿ ಬೋಗುಣಿಗಳು 1,000 ಕತ್ತಿಗಳು ಮತ್ತು ಪಾತ್ರೆಗಳು 29 10 ಚಿನ್ನದ ಬಟ್ಟಲುಗಳು 30 ಬೆಳ್ಳಿಯ ಬಟ್ಟಲುಗಳು 410 ಇತರ ಪಾತ್ರೆಗಳು 1,000.

11 ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.

Read full chapter