Add parallel Print Page Options

44 ಬಳಿಕ ಯೇಸು ಸ್ತ್ರೀಯ ಕಡೆಗೆ ನೋಡಿ ಸಿಮೋನನಿಗೆ, “ಈ ಸ್ತ್ರೀಯು ನಿನಗೆ ಕಾಣುತ್ತಿರುವಳೇ? ನಾನು ನಿನ್ನ ಮನೆಯೊಳಗೆ ಬಂದಾಗ ನೀನು ನನ್ನ ಪಾದಗಳಿಗೆ ನೀರು ಕೊಡಲಿಲ್ಲ. ಆದರೆ ಈಕೆ ತನ್ನ ಕಣ್ಣೀರಿನಿಂದ ನನ್ನ ಪಾದಗಳನ್ನು ತೇವ ಮಾಡಿ ತನ್ನ ತಲೆಯ ಕೂದಲಿಂದ ಒರೆಸಿದಳು. 45 ನೀನು ನನಗೆ ಮುದ್ದಿಡಲಿಲ್ಲ. ಈಕೆಯಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುದ್ದಿಡುತ್ತಿದ್ದಾಳೆ! 46 ನೀನು ನನ್ನ ತಲೆಗೆ ಎಣ್ಣೆಯನ್ನು ಹಚ್ಚಲಿಲ್ಲ. ಈಕೆಯಾದರೋ ನನ್ನ ಪಾದಗಳಿಗೆ ಪರಿಮಳತೈಲವನ್ನು ಹಚ್ಚಿದಳು. 47 ಈಕೆಯ ಅನೇಕ ಪಾಪಗಳು ಕ್ಷಮಿಸಲ್ಪಟ್ಟಿವೆ ಎಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ಈಕೆ ಅಧಿಕವಾದ ಪ್ರೀತಿಯನ್ನು ತೋರಿದಳು. ಆದರೆ ಸ್ವಲ್ಪ ಕ್ಷಮೆ ಹೊಂದುವವನು ಕೇವಲ ಸ್ವಲ್ಪ ಪ್ರೀತಿಯನ್ನೇ ತೋರುವನು” ಎಂದು ಹೇಳಿದನು.

Read full chapter