ಆದಿಕಾಂಡ 17:2-8
Kannada Holy Bible: Easy-to-Read Version
2 ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು.
3 ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ, 4 “ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ: 5 ‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ. 6 ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು. 7 ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು. 8 ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು.
Read full chapterKannada Holy Bible: Easy-to-Read Version. All rights reserved. © 1997 Bible League International