Add parallel Print Page Options

ಆಹಾಜನು ಬೆಟ್ಟದ ಮೇಲೆ ಪ್ರತಿಯೊಂದು ಹಸಿರು ಮರದಡಿಯಲ್ಲಿದ್ದ ಉನ್ನತಸ್ಥಳಗಳಲ್ಲಿ ಧೂಪಹಾಕಿ ಯಜ್ಞಗಳನ್ನರ್ಪಿಸುತ್ತಿದ್ದನು.

5-6 ಆಹಾಜನು ಪಾಪಮಾಡಿದ್ದರಿಂದ ದೇವರು ಅರಾಮ್ಯರನ್ನು ಅವನ ವಿರುದ್ಧವಾಗಿ ಕಳುಹಿಸಿ ಅವನು ಸೋತು ಹೋಗುವಂತೆ ಮಾಡಿದನು. ಅವರಲ್ಲಿ ಬಹುಮಂದಿ ಸೆರೆಹಿಡಿಯಲ್ಪಟ್ಟರು. ಅರಾಮ್ಯರ ಅರಸನು ಅವರನ್ನೆಲ್ಲಾ ದಮಸ್ಕಕ್ಕೆ ಒಯ್ದನು. ಇಸ್ರೇಲರ ಅರಸನಾದ ಪೆಕಹನು ಬಂದು ಆಹಾಜನನ್ನು ಸೋಲಿಸುವಂತೆ ಯೆಹೋವನು ಮಾಡಿದನು. ಪೆಕಹನ ತಂದೆಯ ಹೆಸರು ರೆಮಲ್ಯ. ಪೆಕಹನೂ ಅವನ ಸೈನ್ಯವೂ ಯೆಹೂದ ಸೈನಿಕರಲ್ಲಿ ಒಂದೇ ದಿವಸದಲ್ಲಿ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಧೈರ್ಯಶಾಲಿ ಸೈನಿಕರನ್ನು ಕೊಂದರು. ಯೆಹೂದದ ಜನರನ್ನು ಪೆಕಹನು ಸೋಲಿಸಿದನು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿಧೇಯರಾಗಲು ನಿರಾಕರಿಸಿದರು.

Read full chapter