Add parallel Print Page Options

10 ಆಗ ಎಲೀಷನು ಹಜಾಯೇಲನಿಗೆ, “‘ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.

ಹಜಾಯೇಲನ ಬಗ್ಗೆ ಎಲೀಷನ ಪ್ರವಾದನೆ

11 ಹಜಾಯೇಲನು ನಾಚಿಕೊಳ್ಳುವ ತನಕ ಎಲೀಷನು ಅವನನ್ನು ಒಂದೇ ಸಮನೆ ನೋಡಿದನು. ನಂತರ ದೇವಮನುಷ್ಯನು ಅಳತೊಡಗಿದನು. 12 ಹಜಾಯೇಲನು, “ಸ್ವಾಮೀ, ನೀವು ಅಳುವುದೇಕೇ?” ಎಂದು ಕೇಳಿದನು.

ಎಲೀಷನು, “ನಾನು ಅಳುತ್ತಿರುವುದೇಕೆಂದರೆ ನೀನು ಇಸ್ರೇಲರಿಗೆ ಮಾಡುವ ಕೆಟ್ಟಕಾರ್ಯಗಳು ನನಗೆ ತಿಳಿದಿವೆ. ನೀನು ಅವರ ನಗರಗಳ ಕೋಟೆಗಳನ್ನು ಸುಟ್ಟುಹಾಕುವೆ. ನೀನು ಅವರ ತರುಣರನ್ನು ಖಡ್ಗಗಳಿಂದ ಇರಿದುಕೊಲ್ಲುವೆ. ನೀನು ಅವರ ಮಕ್ಕಳನ್ನು ಕೊಂದುಹಾಕುವೆ. ನೀನು ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಹಾಕುವೆ” ಎಂದು ಹೇಳಿದನು.

13 ಹಜಾಯೇಲನು, “ನಾನು ಬಲಾಢ್ಯನಾದ ಮನುಷ್ಯನಲ್ಲ! ನಾನು ಈ ಮಹತ್ಕಾರ್ಯಗಳನ್ನು ಮಾಡಲಾಗುವುದಿಲ್ಲ!” ಎಂದು ಹೇಳಿದನು.

ಎಲೀಷನು, “ನೀನು ಅರಾಮ್ಯರ ರಾಜನಾಗುವೆಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.

14 ಹಜಾಯೇಲನು ಎಲೀಷನ ಬಳಿಯಿಂದ ಹೊರಟು ತನ್ನ ರಾಜನ ಬಳಿಗೆ ಹೋದನು. ಬೆನ್ಹದದನು ಹಜಾಯೇಲನಿಗೆ, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದನು. ಹಜಾಯೇಲನು, “ನಿನ್ನ ಕಾಯಿಲೆಯು ವಾಸಿಯಾಗುತ್ತದೆಯೆಂದು ಎಲೀಷನು ನನಗೆ ಹೇಳಿದನು” ಎಂದನು.

ಬೆನ್ಹದದನನ್ನು ಹಜಾಯೇಲನು ಕೊಂದುಹಾಕುವನು

15 ಆದರೆ ಮಾರನೆಯ ದಿನ ಹಜಾಯೇಲನು ಒಂದು ಹೊದಿಕೆಯನ್ನು ತೆಗೆದುಕೊಂಡು ನೀರಿನಲ್ಲಿ ನೆನೆಸಿದನು. ನಂತರ ಅವನು ಆ ಹೊದಿಕೆಯನ್ನು ಬೆನ್ಹದದನ ಮುಖದ ಮೇಲೆ ಹಾಕಿ, ಅವನನ್ನು ಉಸಿರುಕಟ್ಟಿಸಿ ಸಾಯಿಸಿದನು. ಹಜಾಯೇಲನು ನೂತನ ರಾಜನಾದನು.

Read full chapter