Add parallel Print Page Options

ಪರಿಚಯ

ಇದು ಆಮೋಸನ ಸಂದೇಶ. ಇವನು ತೆಕೋವ ಎಂಬ ಪಟ್ಟಣದ ಕುರುಬರಲ್ಲೊಬ್ಬನು. ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಸಮಯದಲ್ಲಿ ಮತ್ತು ಅದೇ ಸಮಯದಲ್ಲಿ ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರೇಲನ್ನು ಆಳುತ್ತಿರುವಾಗ ಆಮೋಸನಿಗೆ ದೈವದರ್ಶನಗಳುಂಟಾದವು. ಭೂಕಂಪವಾಗುವುದಕ್ಕಿಂತ ಎರಡು ವರ್ಷಗಳಿಗೆ ಮೊದಲು ಈ ದರ್ಶನಗಳಾದವು.

Read full chapter

ಆಗ ಯೆಹೋವನು ನನಗೆ, “ಆಮೋಸನೇ, ಏನನ್ನು ನೋಡುತ್ತೀ?” ಎಂದು ಕೇಳಿದನು.

ಅದಕ್ಕೆ ನಾನು, “ನೂಲುಗುಂಡು” ಅಂದೆನು.

ಆಗ ನನ್ನ ಒಡೆಯನು, “ನೋಡು, ನನ್ನ ಜನರಾದ ಇಸ್ರೇಲರ ಮೇಲೆ ನೂಲುಗುಂಡನ್ನು ಹಾಕುವೆನು. ಅವರನ್ನು ನಾನು ಸುಮ್ಮನೆ ಬಿಟ್ಟುಬಿಡುವುದಿಲ್ಲ. ಅವರ ಪಾಪದ ಸ್ಥಳಗಳನ್ನು ನಾನು ತೆಗೆದುಬಿಡುವೆನು. ಇಸಾಕನ ವೇದಿಕೆಗಳೆಲ್ಲಾ ನಾಶವಾಗುವದು. ಇಸ್ರೇಲಿನ ಪವಿತ್ರ ಸ್ಥಳಗಳೆಲ್ಲಾ ಬಂಡೆಯ ರಾಶಿಯಾಗಿ ಮಾರ್ಪಡುವವು. ಯಾರೊಬ್ಬಾಮನ ಕುಟುಂಬದ ಮೇಲೆ ಆಕ್ರಮಣ ಮಾಡಿ ಅವರನ್ನು ಸಂಹರಿಸುವೆನು” ಎಂದು ಹೇಳಿದನು.

ಆಮೋಸನನ್ನು ಪ್ರವಾದಿಸದಂತೆ ಅಮಚ್ಯನು ಪ್ರಯತ್ನಿಸಿದ್ದು

10 ಬೇತೇಲಿನ ಯಾಜಕನಾದ ಅಮಚ್ಯನು ಇಸ್ರೇಲಿನ ಅರಸನಾದ ಯಾರೊಬ್ಬಾಮನಿಗೆ ಈ ಪತ್ರವನ್ನು ಕಳುಹಿಸಿದನು. “ನಿನಗೆ ವಿರುದ್ಧವಾಗಿ ಆಮೋಸನು ಯೋಜನೆಗಳನ್ನು ಮಾಡುತ್ತಿದ್ದಾನೆ. ಇಸ್ರೇಲಿನ ಜನರು ನಿನಗೆ ವಿರುದ್ಧವಾಗಿ ಯುದ್ಧಮಾಡುವಂತೆ ಪ್ರಯತ್ನಿಸುತ್ತಾನೆ. ಅವನು ಎಷ್ಟೆಲ್ಲಾ ಮಾತಾಡುತ್ತಾನೆಂದರೆ, ಈ ದೇಶವು ಅವನ ಮಾತುಗಳನ್ನು ತುಂಬಲು ಸಾಧ್ಯವಿಲ್ಲ. 11 ಅಮೋಸನು, ‘ಯಾರೊಬ್ಬಾಮನು ಕತ್ತಿಯಿಂದ ಸಂಹರಿಸಲ್ಪಡುವನು ಮತ್ತು ಇಸ್ರೇಲಿನ ಜನರು ಸೆರೆಹಿಡಿಯಲ್ಪಟ್ಟವರಾಗಿ ಪರದೇಶಕ್ಕೆ ಒಯ್ಯಲ್ಪಡುವರು’” ಎಂದು ಹೇಳಿದ್ದಾನೆ.

12 ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ, “ಭವಿಷ್ಯವಾದಿಯೇ, ನೀನು ಯೆಹೂದಕ್ಕೆ ಹೋಗಿ ಅಲ್ಲಿ ನಿನ್ನ ಹೊಟ್ಟೆ ತುಂಬಿಸಿಕೊ. ನಿನ್ನ ಪ್ರಸಂಗವನ್ನು ಅಲ್ಲಿಯೇ ಮಾಡು. 13 ಬೇತೇಲಿನಲ್ಲಿ ಇನ್ನು ನೀನು ಪ್ರವಾದಿಸುವದು ಬೇಡ. ಇದು ಯಾರೊಬ್ಬಾಮನ ಪವಿತ್ರಸ್ಥಳ. ಇದು ಇಸ್ರೇಲಿನ ದೇವಾಲಯ” ಎಂದು ಹೇಳಿದನು.

14 ಅದಕ್ಕೆ ಅಮೋಸನು ಅಮಚ್ಯನಿಗೆ, “ಪ್ರವಾದಿಸುವದು ನನ್ನ ಕೆಲಸವಲ್ಲ. ಅಲ್ಲದೆ ನಾನು ಪ್ರವಾದಿಗಳ ಕುಟುಂಬಕ್ಕೂ ಸೇರಿದವನಲ್ಲ. ನಾನು ದನ ಮೇಯಿಸುವವನೂ, ಅತ್ತಿ ಮರಗಳನ್ನು ಹತ್ತಿ ಹಣ್ಣು ಕೀಳುವವನೂ ಆಗಿದ್ದೇನೆ. 15 ನಾನು ಕುರಿಕಾಯುತ್ತಿರುವಾಗ ಯೆಹೋವನು ನನ್ನನ್ನು ಕುರಿಗಳ ಹಿಂದೆ ಹೋಗಬೇಡ ಎಂದು ಕರೆದನು. ಆತನು ನನಗೆ, ‘ನನ್ನ ಜನರಾದ ಇಸ್ರೇಲರ ಬಳಿಗೆ ಹೋಗಿ ಪ್ರವಾದಿಸು’ ಎಂದು ಹೇಳಿದನು. 16 ಆದ್ದರಿಂದ ಯೆಹೋವನ ಸಂದೇಶಕ್ಕೆ ಕಿವಿಗೊಡು. ಆದರೆ ನೀನು, ‘ಇಸ್ರೇಲರಿಗೆ ವಿರುದ್ಧವಾಗಿ ಪ್ರವಾದಿಸಬೇಡ. ಇಸಾಕನ ಕುಟುಂಬದ ವಿರುದ್ಧ ಪ್ರಸಂಗಿಸಬೇಡ’ ಎಂದು ಹೇಳುತ್ತಿ.

Read full chapter

ಯೆಹೋವನು ನನಗೆ, “ಆಮೋಸನೇ, ನೀನು ಏನನ್ನು ನೋಡುತ್ತೀ?” ಎಂದು ಕೇಳಿದನು.

ಅದಕ್ಕೆ ನಾನು, “ಒಂದು ಪುಟ್ಟಿ ಬೇಸಿಗೆಯ ಹಣ್ಣುಗಳು” ಎಂದು ಹೇಳಿದೆನು.

ಆಗ ಯೆಹೋವನು ನನಗೆ, “ನನ್ನ ಜನರಾದ ಇಸ್ರೇಲರಿಗೆ ಅಂತ್ಯಕಾಲವು ಬಂದಿದೆ. ಇನ್ನು ಮೇಲೆ ನಾನು ಅವರನ್ನು ಸುಮ್ಮನೆ ಬಿಡುವುದಿಲ್ಲ.

Read full chapter