Add parallel Print Page Options

ದೇವಾಲಯಕ್ಕೆ ಯೇಸುವಿನ ಪ್ರವೇಶ

(ಮತ್ತಾಯ 21:12-17; ಮಾರ್ಕ 11:15-19; ಯೋಹಾನ 2:13-22)

45 ಯೇಸು ದೇವಾಲಯದೊಳಗೆ ಹೋಗಿ, ಅಲ್ಲಿ ಮಾರಾಟ ಮಾಡುತ್ತಿದ್ದ ಜನರನ್ನೆಲ್ಲಾ ಹೊರಕ್ಕೆ ಓಡಿಸತೊಡಗಿ, 46 ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’(A) ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’”(B) ಎಂದನು.

47 ಯೇಸು ದೇವಾಲಯದಲ್ಲಿ ಪ್ರತಿದಿನ ಜನರಿಗೆ ಉಪದೇಶಿಸಿದನು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಜನರ ನಾಯಕರಲ್ಲಿ ಕೆಲವರು ಯೇಸುವನ್ನು ಕೊಲ್ಲಲು ಬಯಸಿದರು. 48 ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.

Read full chapter