Add parallel Print Page Options

ಯೇಸುವಿನ ಜನನ

(ಮತ್ತಾಯ 1:18-25)

ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು. ಇದು ಮೊಟ್ಟಮೊದಲನೆಯ ಜನಗಣತಿಯಾಗಿತ್ತು. ಕುರೇನ್ಯನು ಸಿರಿಯ ದೇಶದ ರಾಜ್ಯಪಾಲನಾಗಿದ್ದಾಗ ಇದು ಸಂಭವಿಸಿತು. ಜನರೆಲ್ಲರೂ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ತಮ್ಮತಮ್ಮ ಊರುಗಳಿಗೆ ಪ್ರಯಾಣ ಮಾಡಿದರು.

ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು. ಅವನು ತನ್ನೊಂದಿಗೆ ಮರಿಯಳನ್ನೂ ಕರೆದುಕೊಂಡು ಹೋದನು. ಆಕೆಗೆ ಅವನೊಂದಿಗೆ ನಿಶ್ಚಿತಾರ್ಥವಾಗಿತ್ತು. (ಮರಿಯಳು ಆಗ ಗರ್ಭಿಣಿಯಾಗಿದ್ದಳು.) ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು. ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.

Read full chapter