Add parallel Print Page Options

ಯೇಸುವಿನ ಹನ್ನೆರಡು ಮಂದಿ ಅಪೊಸ್ತಲರು

(ಮತ್ತಾಯ 10:1-4; ಮಾರ್ಕ 3:13-19)

12 ಆ ಸಮಯದಲ್ಲಿ ಯೇಸು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು. ದೇವರಲ್ಲಿ ಪ್ರಾರ್ಥಿಸುತ್ತಾ ರಾತ್ರಿಯೆಲ್ಲಾ ಅಲ್ಲೇ ಇದ್ದನು. 13 ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರನ್ನು ಕರೆದನು. ಅವರಲ್ಲಿ ಹನ್ನೆರಡು ಮಂದಿಯನ್ನು ಆತನು ಆರಿಸಿಕೊಂಡನು. ಯೇಸು ಈ ಹನ್ನೆರಡು ಜನರಿಗೆ, “ಅಪೊಸ್ತಲರು” ಎಂದು ಹೆಸರಿಟ್ಟನು. ಅವರು ಯಾರೆಂದರೆ:

14 ಸೀಮೋನ (ಯೇಸು ಅವನಿಗೆ ಪೇತ್ರನೆಂದು ಹೆಸರಿಟ್ಟನು.)

ಮತ್ತು ಪೇತ್ರನ ಸಹೋದರನಾದ ಅಂದ್ರೆಯ,

ಯಾಕೋಬ

ಮತ್ತು ಯೋಹಾನ,

ಫಿಲಿಪ್ಪ

ಮತ್ತು ಬಾರ್ತೊಲೊಮಾಯ,

15 ಮತ್ತಾಯ,

ತೋಮ,

ಯಾಕೋಬ (ಅಲ್ಫಾಯನ ಮಗ)

ಮತ್ತು ದೇಶಾಭಿಮಾನಿ[a] ಎನಿಸಿಕೊಂಡಿದ್ದ ಸಿಮೋನ,

16 ಯೂದ (ಯಾಕೋಬನ ಮಗ)

ಮತ್ತು ಇಸ್ಕರಿಯೋತ ಯೂದ (ಯೇಸುವಿಗೆ ದ್ರೋಹ ಮಾಡಿದವನು ಇವನೇ.)

Read full chapter

Footnotes

  1. 6:15 ದೇಶಾಭಿಮಾನಿ ಅಕ್ಷರಶಃ, ಉಗ್ರಗಾಮಿ. ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿದ್ದ ಯೆಹೂದ್ಯರ ರಾಜಕೀಯ ಪಂಗಡಕ್ಕೆ ಸೇರಿದವನಾಗಿದ್ದನು.