Add parallel Print Page Options

21 ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.

ಪ್ರಭುವಿನ ಭೋಜನ

(ಮತ್ತಾಯ 26:26-30; ಲೂಕ 22:15-20; 1 ಕೊರಿಂಥ. 11:23-25)

22 ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.

Read full chapter