Add parallel Print Page Options

12 ದೆವ್ವಗಳು ಯೇಸುವಿಗೆ, “ನಮ್ಮನ್ನು ಹಂದಿಗಳೊಳಗೆ ಕಳುಹಿಸಿಕೊಡು” ಎಂದು ಬೇಡಿಕೊಂಡವು. 13 ಯೇಸು ಅವುಗಳಿಗೆ ಅಪ್ಪಣೆ ಕೊಡಲು ಅವು ಅವನನ್ನು ಬಿಟ್ಟು, ಹಂದಿಗಳೊಳಗೆ ಹೊಕ್ಕವು. ಆಗ ಹಂದಿಗಳೆಲ್ಲಾ ಬೆಟ್ಟದಿಂದ ಇಳಿದು, ಸರೋವರದೊಳಕ್ಕೆ ಬಿದ್ದು ಮುಳುಗಿಹೋದವು. ಆ ಹಿಂಡಿನಲ್ಲಿ ಸುಮಾರು ಎರಡು ಸಾವಿರ ಹಂದಿಗಳಿದ್ದವು.

14 ಹಂದಿಗಳನ್ನು ಕಾಯುತ್ತಿದ್ದ ಜನರು ಪಟ್ಟಣದೊಳಕ್ಕೆ ಮತ್ತು ತೋಟಗಳಿಗೆ ಓಡಿಹೋಗಿ ಜನರಿಗೆಲ್ಲ ತಿಳಿಸಿದರು. 15 ಆಗ ಜನರು ನಡೆದ ಸಂಗತಿಯನ್ನು ನೋಡಲು ಯೇಸುವಿನ ಬಳಿಗೆ ಬಂದರು. ಅನೇಕ ದೆವ್ವಗಳಿಂದ ಪೀಡಿತನಾಗಿದ್ದ ಮನುಷ್ಯನು ಬಟ್ಟೆ ಹಾಕಿಕೊಂಡು ಅಲ್ಲಿ ಕುಳಿತಿರುವುದನ್ನು ಅವರು ಕಂಡರು. ಅವನು ಮತ್ತೆ ಸ್ವಸ್ಥ ಬುದ್ಧಿಯುಳ್ಳವನಾಗಿದ್ದನು. ಆ ಜನರು ಅವನನ್ನು ನೋಡಿ ಹೆದರಿದರು. 16 ಅಲ್ಲಿದ್ದ ಕೆಲವು ಜನರು, ಯೇಸು ಮಾಡಿದ ಈ ಕಾರ್ಯವನ್ನು ನೋಡಿದ್ದರು. ಈ ಜನರೇ ಉಳಿದ ಜನರಿಗೆಲ್ಲರಿಗೂ ನಡೆದ ಸಂಗತಿಯನ್ನು ಅಂದರೆ ದೆವ್ವದಿಂದ ಪೀಡಿತನಾಗಿದ್ದವನಿಗೂ ದೆವ್ವಗಳಿಗೂ ಮತ್ತು ಹಂದಿಗಳಿಗೂ ಸಂಭವಿಸಿದ್ದನ್ನು ತಿಳಿಸಿದರು.

Read full chapter