Add parallel Print Page Options

ಇತರರನ್ನು ಪಾಪಕ್ಕೆ ನಡೆಸುವುದರ ಬಗ್ಗೆ ಯೇಸುವಿನ ಎಚ್ಚರಿಕೆ

(ಮತ್ತಾಯ 18:6-9; ಲೂಕ 17:1-2)

42 “ನನ್ನಲ್ಲಿ ನಂಬಿಕೆಯಿಟ್ಟಿರುವ ಈ ಚಿಕ್ಕ ಮಕ್ಕಳಲ್ಲಿ ಒಬ್ಬನನ್ನು ಪಾಪಕ್ಕೆ ನಡೆಸುವ ವ್ಯಕ್ತಿಯು ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಕೊಂಡು, ಸಮುದ್ರದಲ್ಲಿ ಮುಳುಗುವುದೇ ಒಳ್ಳೆಯದು. 43 ನಿನ್ನ ಕೈ ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ ಅದನ್ನು ಕತ್ತರಿಸಿಬಿಡು. ಎರಡು ಕೈಗಳನ್ನು ಇಟ್ಟುಕೊಂಡು, ನಂದಿಹೋಗದ ಬೆಂಕಿಯಿರುವ ನರಕಕ್ಕೆ ಹೋಗುವುದಕ್ಕಿಂತ ಅಂಗವಿಕಲನಾಗಿದ್ದು ನಿತ್ಯಜೀವವನ್ನು ಪಡೆಯುವುದೇ ಮೇಲು. ಆ ಸ್ಥಳದಲ್ಲಿ ಬೆಂಕಿ ಆರಿಹೋಗುವುದೇ ಇಲ್ಲ. 44 [a] 45 ನಿನ್ನ ಕಾಲು ನಿನ್ನನ್ನು ಪಾಪದಲ್ಲಿ ಸಿಕ್ಕಿಸುವುದಾದರೆ, ಅದನ್ನು ಕತ್ತರಿಸಿಬಿಡು. ಎರಡು ಕಾಲುಗಳನ್ನು ಇಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಕುಂಟನಾಗಿರುವುದೇ ಮೇಲು. 46 [b] 47 ನಿನ್ನ ಕಣ್ಣು ನಿನ್ನನ್ನು ಪಾಪದಲ್ಲಿ ಸಿಲುಕಿಸುವುದಾದರೆ, ಅದನ್ನು ಕಿತ್ತುಬಿಡು. ಎರಡು ಕಣ್ಣುಗಳನ್ನಿಟ್ಟುಕೊಂಡು ನರಕದೊಳಗೆ ಎಸೆಯಲ್ಪಡುವುದಕ್ಕಿಂತ ಒಂದೇ ಕಣ್ಣುಳ್ಳವನಾಗಿದ್ದು ನಿತ್ಯಜೀವವನ್ನು ಹೊಂದಿಕೊಳ್ಳುವುದೇ ಮೇಲು. 48 ನರಕದಲ್ಲಿ ಮನುಷ್ಯರನ್ನು ತಿನ್ನುವ ಹುಳಗಳು ಸಾಯುವುದೇ ಇಲ್ಲ ಮತ್ತು ಬೆಂಕಿಯು ಆರುವುದೇ ಇಲ್ಲ.

Read full chapter

Footnotes

  1. 9:44 ಕೆಲವು ಗ್ರೀಕ್ ಪ್ರತಿಗಳು 44ನೇ ವಚನವನ್ನು ಹೊಂದಿವೆ. ಈ ವಚನವು 48ನೇ ವಚನವೇ ಆಗಿದೆ.
  2. 9:46 ಕೆಲವು ಗ್ರೀಕ್ ಪ್ರತಿಗಳು 46ನೇ ವಚನವನ್ನು ಹೊಂದಿವೆ. ಈ ವಚನವು 48ನೇ ವಚನವೇ ಆಗಿದೆ.