Add parallel Print Page Options

ಯೇಸುವಿನಿಂದ ಕಾಯಿಲೆಯ ಬಾಲಕನಿಗೆ ಸ್ವಸ್ಥತೆ

(ಮಾರ್ಕ 9:14-29; ಲೂಕ 9:37-43)

14 ಯೇಸು ಮತ್ತು ಆತನ ಶಿಷ್ಯರು ಜನರ ಬಳಿಗೆ ಹಿಂತಿರುಗಿ ಹೋದರು. ಒಬ್ಬನು ಯೇಸುವಿನ ಬಳಿಗೆ ಬಂದು ಆತನ ಮುಂದೆ ಅಡ್ಡಬಿದ್ದು, 15 “ಪ್ರಭುವೇ, ನನ್ನ ಮಗನಿಗೆ ದಯೆತೋರು. ಅವನು ಮೂರ್ಛಾರೋಗದಿಂದ ಬಹಳ ಬಾಧೆಪಡುತ್ತಿದ್ದಾನೆ. ಅವನು ಆಗಾಗ್ಗೆ ಬೆಂಕಿಯಲ್ಲಿ ಇಲ್ಲವೇ ನೀರಿನಲ್ಲಿ ಬೀಳುತ್ತಾನೆ. 16 ನಾನು ನನ್ನ ಮಗನನ್ನು ನಿನ್ನ ಶಿಷ್ಯರ ಬಳಿಗೆ ತಂದೆನು. ಆದರೆ ಅವನನ್ನು ಗುಣಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ” ಎಂದನು.

17 ಯೇಸು, “ಅಯ್ಯೋ, ವಿಶ್ವಾಸವಿಲ್ಲದ ವಕ್ರಸಂತತಿಯೇ, ಇನ್ನೆಷ್ಟು ಕಾಲ ನಾನು ನಿಮ್ಮೊಂದಿಗಿರಬೇಕು? ಇನ್ನೆಷ್ಟು ಕಾಲ ನಾನು ನಿಮ್ಮನ್ನು ಸಹಿಸಿಕೊಳ್ಳಲಿ? ಆ ಬಾಲಕನನ್ನು ಇಲ್ಲಿಗೆ ಕರೆತನ್ನಿ” ಎಂದು ಉತ್ತರಕೊಟ್ಟನು. 18 ಯೇಸು ಬಾಲಕನಲ್ಲಿದ್ದ ದೆವ್ವಕ್ಕೆ ಬಲವಾಗಿ ಗದರಿಸಲು ದೆವ್ವವು ಅವನನ್ನು ಬಿಟ್ಟುಹೋಯಿತು. ಅವನಿಗೆ ಆ ಕ್ಷಣದಲ್ಲೇ ಗುಣವಾಯಿತು.

19 ಆಗ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅವನನ್ನು ದೆವ್ವದಿಂದ ಬಿಡಿಸಲು ನಾವು ಪ್ರಯತ್ನಿಸಿದರೂ ನಮಗೇಕೆ ಸಾಧ್ಯವಾಗಲಿಲ್ಲ?” ಎಂದರು.

20 ಅದಕ್ಕೆ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮ ನಂಬಿಕೆಯು ಸಾಸಿವೆ ಕಾಳಿನಷ್ಟಿದ್ದರೂ, ಈ ಪರ್ವತಕ್ಕೆ ‘ಇಲ್ಲಿಂದ ಅಲ್ಲಿಗೆ ಹೋಗು’ ಎಂದು ನೀವು ಹೇಳಿದರೂ ಅದು ಹೋಗುತ್ತದೆ. ನಿಮಗೆ ಅಸಾಧ್ಯವಾಗದ ಕಾರ್ಯಗಳೇ ಇರದು” ಎಂದನು.

Read full chapter