ಮತ್ತಾಯ 28:1-8
Kannada Holy Bible: Easy-to-Read Version
ಯೇಸುವಿನ ಪುನರುತ್ಥಾನ
(ಮಾರ್ಕ 16:1-8; ಲೂಕ 24:1-12; ಯೋಹಾನ 20:1-10)
28 ಸಬ್ಬತ್ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ಧಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಹೋದರು.
2 ಆಗ ಭೀಕರ ಭೂಕಂಪವಾಯಿತು. ಪ್ರಭುವಿನ ದೂತನೊಬ್ಬನು ಆಕಾಶದಿಂದ ಇಳಿದುಬಂದನು. ಆ ದೇವದೂತನು ಸಮಾಧಿಯ ಬಳಿಗೆ ಹೋಗಿ, ಸಮಾಧಿಯ ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಆ ಬಂಡೆಯ ಮೇಲೆ ಕುಳಿತುಕೊಂಡನು. 3 ದೇವದೂತನು ಮಿಂಚಿನಂತೆ ಪ್ರಕಾಶಿಸುತ್ತಿದ್ದನು. ಅವನ ಬಟ್ಟೆಗಳು ಮಂಜಿನಂತೆ ಬಿಳುಪಾಗಿದ್ದವು. 4 ಸಮಾಧಿಯನ್ನು ಕಾಯುತ್ತಿದ್ದ ಸೈನಿಕರು ದೇವದೂತನನ್ನು ಕಂಡು ಬಹಳವಾಗಿ ಹೆದರಿ ಭಯದಿಂದ ನಡುಗುತ್ತಾ ಸತ್ತಂತಾದರು.
5 ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ. 6 ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ. 7 ಬೇಗನೆ ಹೋಗಿ ಆತನ ಶಿಷ್ಯರಿಗೆ, ‘ಯೇಸು ಪುನರುತ್ಥಾನ ಹೊಂದಿದ್ದಾನೆ. ಆತನು ಗಲಿಲಾಯಕ್ಕೆ ಹೋಗುತ್ತಿದ್ದಾನೆ. ನಿಮಗಿಂತ ಮುಂಚೆಯೇ ಆತನು ಅಲ್ಲಿರುತ್ತಾನೆ. ನೀವು ಆತನನ್ನು ಅಲ್ಲಿ ನೋಡುತ್ತೀರಿ’ ಎಂದು ಹೇಳಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ” ಎಂದನು.
8 ಕೂಡಲೇ ಆ ಸ್ತ್ರೀಯರು ಭಯದಿಂದಲೂ ಸಂತೋಷದಿಂದಲೂ ಸಮಾಧಿಯಿಂದ ಹೊರಟರು. ನಡೆದ ಸಂಗತಿಯನ್ನು ಶಿಷ್ಯರಿಗೆ ತಿಳಿಸಲು ಅವರು ಓಡಿಹೋಗುತ್ತಿರಲು,
Read full chapterKannada Holy Bible: Easy-to-Read Version. All rights reserved. © 1997 Bible League International