Font Size
ಮತ್ತಾಯ 8:4-8
Kannada Holy Bible: Easy-to-Read Version
ಮತ್ತಾಯ 8:4-8
Kannada Holy Bible: Easy-to-Read Version
4 ಯೇಸು ಅವನಿಗೆ, “ಇದು ಹೇಗಾಯಿತೆಂಬುದನ್ನು ಯಾರಿಗೂ ಹೇಳಬೇಡ. ಈಗ ನೀನು ಹೋಗಿ ಯಾಜಕನಿಗೆ ನಿನ್ನ ಮೈಯನ್ನು ತೋರಿಸು. ಗುಣಹೊಂದಿದವರು ಮೋಶೆಯ ಆಜ್ಞೆಗನುಸಾರವಾಗಿ ಕೊಡತಕ್ಕ ಕಾಣಿಕೆಯನ್ನು ಅರ್ಪಿಸು. ನೀನು ಗುಣವಾದದ್ದಕ್ಕೆ ಅದು ಸಾಕ್ಷಿಯಾಗಿರುವುದು” ಎಂದು ಹೇಳಿದನು.[a]
ಆರೋಗ್ಯ ಹೊಂದಿದ ಅಧಿಕಾರಿಯ ಸೇವಕ
(ಲೂಕ 7:1-10; ಯೋಹಾನ 4:43-54)
5 ಯೇಸು ಕಪೆರ್ನೌಮ್ ಪಟ್ಟಣಕ್ಕೆ ಹೊರಟುಹೋದನು. ಆತನು ಪಟ್ಟಣಕ್ಕೆ ಪ್ರವೇಶಿಸಿದಾಗ ಸೈನ್ಯದ ಅಧಿಕಾರಿಯೊಬ್ಬನು ಬಂದು, 6 “ಪ್ರಭುವೇ, ನನ್ನ ಸೇವಕನು ಕಾಯಿಲೆಯಿಂದ ಹಾಸಿಗೆಯ ಮೇಲಿದ್ದಾನೆ. ಅವನು ಬಹಳ ನೋವಿನಿಂದ ನರಳುತ್ತಿದ್ದಾನೆ” ಎಂದು ಸಹಾಯಕ್ಕಾಗಿ ಬೇಡಿಕೊಂಡನು.
7 ಯೇಸು ಆ ಅಧಿಕಾರಿಗೆ, “ನಾನು ಬಂದು ಅವನನ್ನು ಗುಣಪಡಿಸುತ್ತೇನೆ” ಎಂದು ಹೇಳಿದನು.
8 ಅದಕ್ಕೆ ಆ ಅಧಿಕಾರಿ, “ಪ್ರಭುವೇ, ನನ್ನ ಮನೆಗೆ ನೀನು ಬರುವಷ್ಟು ಯೋಗ್ಯತೆ ನನಗಿಲ್ಲ. ಅವನಿಗೆ ಗುಣವಾಗಲಿ ಎಂದು ನೀನು ಆಜ್ಞಾಪಿಸಿದರೆ ಸಾಕು, ಅವನಿಗೆ ಗುಣವಾಗುವುದು.
Read full chapterFootnotes
- 8:4 ನೋಡಿರಿ: ಯಾಜಕ. 14:1-32.
Kannada Holy Bible: Easy-to-Read Version (KERV)
Kannada Holy Bible: Easy-to-Read Version. All rights reserved. © 1997 Bible League International